Ecclesiastes 10:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ರಾಜನು ಒಳ್ಳೆಯ ಕುಟುಂಬದಿಂದ ಬಂದವನಾಗಿದ್ದರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು; ಅಧಿಪತಿಗಳು ತಿನ್ನುವುದನ್ನೂ ಕುಡಿಯುವುದನ್ನೂ ಹತೋಟಿಯಲ್ಲಿಟ್ಟುಕೊಂಡರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು. ಅಧಿಪತಿಗಳು ತಿನ್ನುವುದೂ ಕುಡಿಯುವುದೂ ಬಲಹೊಂದುವುದಕ್ಕಾಗಿಯೇ ಹೊರತು ಮತ್ತರಾಗುವುದಕ್ಕಾಗಿಯಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!
Kannada BSI Bible 2016
ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶವೇ, ನಿನ್ನ ರಾಜನು ಕುಲೀನನಾಗಿದ್ದು ಪ್ರಭುಗಳು ಅಮಲನ್ನೊಲ್ಲದೆ ಶಕ್ತಿಗೊಳ್ಳುವೆವೆಂದು ಸರಿಯಾದ ಸಮಯದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ ಸರಿ.
Kannada Bible (KNCL) BSI 2016
ನಾಡೇ, ನಿನ್ನ ಒಡೆಯ ಕುಲೀನನಾಗಿದ್ದು, ನಿನ್ನ ನಾಯಕರೆಲ್ಲ ಸಕಾಲದಲ್ಲಿ ಊಟಮಾಡಿ, ಕುಡುಕರಾಗುವುದರ ಬದಲು ಶಕ್ತಿಯುತರಾದರೆ, ಅದು ನಿನ್ನ ಸೌಭಾಗ್ಯವೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶ್ರೇಷ್ಠ ಹಿನ್ನೆಲೆಯವನು ದೇಶಕ್ಕೆ ಅರಸನಾದರೆ, ರಾಜಕುಮಾರರು ಕುಡುಕರಾಗುವುದಕ್ಕೆ ಬದಲು, ಸರಿಯಾದ ಸಮಯದಲ್ಲಿ ಶಕ್ತಿಗಾಗಿ ಊಟ ಮಾಡಿದರೆ ಅದು ದೇಶಕ್ಕೆ ಆಶೀರ್ವಾದ.