Ecclesiastes 10:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಛಾವಣಿಗೆಯು ಬೀಳತೊಡಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು.
Kannada BSI Bible 2016
ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೋಮಾರಿತನದಿಂದ ತೊಲೆಗಳು ಬೊಗ್ಗುವವು, ಜೋಲುಗೈಯಿಂದ ಮನೆ ಸೋರುವದು.
Kannada Bible (KNCL) BSI 2016
ಮೈಗಳ್ಳನ ಮನೆ ಅಂಕುಡೊಂಕಾಗಿರುತ್ತದೆ; ಸೋಮಾರಿಯ ಸೂರು ಸೋರುತ್ತಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೋಮಾರಿತನದಿಂದ ಮನೆ ಕುಸಿಯುತ್ತದೆ. ಜೋಲುಗೈಯಿಂದ ಮನೆ ಸೋರುತ್ತದೆ.