Ecclesiastes 10:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನನ್ನು ಮನಸ್ಸಿನಲ್ಲಿಯೂ ದೂಷಿಸಬೇಡ; ನಿನ್ನ ಮನೆಯಲ್ಲಿ ಒಬ್ಬಂಟಿಗನಾಗಿರುವಾಗಲೂ ಐಶ್ವರ್ಯವಂತರನ್ನು ದೂಷಿಸಬೇಡ. ಯಾಕೆಂದರೆ ಚಿಕ್ಕ ಪಕ್ಷಿಯೊಂದು ಹಾರಿಹೋಗಿ, ನೀನು ಹೇಳಿದ ಪ್ರತಿಯೊಂದನ್ನು ಅವರಿಗೆ ಹೇಳಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.
Kannada BSI Bible 2016
ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸಿನಲ್ಲಿಯೂ ರಾಜನನ್ನು ದೂಷಿಸದಿರು, ಮಲಗುವ ಮನೆಯಲ್ಲಿಯೂ ಧನಿಕನನ್ನು ಬಯ್ಯದಿರು; ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸೀತು; ಪಕ್ಷಿಯು ಆ ವಿಷಯವನ್ನು ತಿಳಿಸೀತು.
Kannada Bible (KNCL) BSI 2016
ಅರಸನನ್ನು ಮನಸ್ಸಿನಲ್ಲಿಯೂ ನಿಂದಿಸಬೇಡ; ಧನಿಕನನ್ನು ಮಲಗುವ ಕೋಣೆಯಲ್ಲೂ ದೂಷಿಸಬೇಡ; ಆಕಾಶದ ಹಕ್ಕಿ ಆ ಸುದ್ದಿಯನ್ನು ಮುಟ್ಟಿಸೀತು; ಹಾರುವ ಪಕ್ಷಿ ಆ ಸಮಾಚಾರವನ್ನು ತಿಳಿಸೀತು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು.
Recommended Reading