Ecclesiastes 11:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.
Kannada BSI Bible 2016
ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಹೃದಯದಿಂದ ಕರಕರೆಯನ್ನೂ ದೇಹದಿಂದ ಶ್ರಮೆಯನ್ನೂ ತೊಲಗಿಸು; ಬಾಲ್ಯವೂ ಪ್ರಾಯವೂ ವ್ಯರ್ಥವಷ್ಟೆ.
Kannada Bible (KNCL) BSI 2016
ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.