Ecclesiastes 11:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಡಗಳು ನೀರಿನಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತವೆ. ಮರವು ದಕ್ಷಿಣಕ್ಕಾಗಲಿ ಉತ್ತರಕ್ಕಾಗಲಿ ಬಿದ್ದರೆ, ಅದು ತಾನು ಬಿದ್ದಲ್ಲಿಯೇ ಇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು.
Kannada BSI Bible 2016
ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಳೆ ತುಂಬಿದ ಮೋಡಗಳು ಭೂವಿುಯ ಮೇಲೆ ಸುರಿದುಬಿಡುವವು; ಮರವು ತೆಂಕಣಕ್ಕಾಗಲಿ ಬಡಗಣಕ್ಕಾಗಲಿ ಬಿದ್ದರೆ ಬಿದ್ದ ಹಾಗೆಯೇ ಇರುವದು.
Kannada Bible (KNCL) BSI 2016
ಮಳೆ ತುಂಬಿದ ಮೋಡಗಳು ನೆಲದ ಮೇಲೆ ಸುರಿದುಬಿಡುತ್ತವೆ. ಮರವು ದಕ್ಷಿಣದ ಕಡೆಗಾಗಲಿ, ಉತ್ತರದ ಕಡೆಗಾಗಲಿ ಉರುಳಿದರೆ ಬಿದ್ದ ಕಡೆಯಲ್ಲೆ ಬಿದ್ದಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು.