Ecclesiastes 11:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾಳಿಯ ಬೀಸುವಿಕೆಯನ್ನೂ ತನ್ನ ತಾಯಿಯ ಗರ್ಭದಲ್ಲಿ ಮಗುವಿನ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿದಿಲ್ಲವೋ ಅದೇರೀತಿಯಲ್ಲಿ ಸೃಷ್ಟಿಕರ್ತನ ಕಾರ್ಯಗಳನ್ನು ನೀನು ಅರಿತುಕೊಳ್ಳಲಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ.
Kannada BSI Bible 2016
ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಳಿಯ ಗತಿಯನ್ನೂ ಗರ್ಭಿಣಿಯ ಗರ್ಭದೊಳಗೆ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿಯುವದಿಲ್ಲವೋ ಹಾಗೆ ಸರ್ವಕರ್ತನಾದ ದೇವರ ಕಾರ್ಯವನ್ನು ಅರಿಯೆ.
Kannada Bible (KNCL) BSI 2016
ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನಿನ್ನಿಂದ ತಿಳಿಯಲಾಗದು. ಅಂತೆಯೇ ಸರ್ವೇಶ್ವರನಾದ ದೇವರ ಕಾರ್ಯವನ್ನು ನಿನ್ನಿಂದ ಗ್ರಹಿಸಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನೀನು ಹೇಗೆ ಗ್ರಹಿಸಲಾರೆಯೋ, ಹಾಗೆಯೇ, ಸರ್ವ ಸೃಷ್ಟಿಕರ್ತ ಆಗಿರುವ ದೇವರ ಕೆಲಸವನ್ನು ನೀನು ಗ್ರಹಿಸಲಾರೆ.