Ecclesiastes 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದ ತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.
Kannada BSI Bible 2016
ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ.
Kannada Bible (KNCL) BSI 2016
ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.