Ecclesiastes 11:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಜೀವನದ ಪ್ರತಿಯೊಂದು ದಿನದಲ್ಲಿಯೂ ಆನಂದಿಸು. ನೀನು ಎಷ್ಟುಕಾಲ ಬದುಕುವೆ ಎಂಬುದು ಮುಖ್ಯವಲ್ಲ. ಆದರೆ ಕತ್ತಲೆಯ ದಿನಗಳು ಬಹಳವೆಂದು ಜ್ಞಾಪಕದಲ್ಲಿಟ್ಟುಕೊ. ಮುಂದೆ ಸಂಭವಿಸುವುದೆಲ್ಲಾ ವ್ಯರ್ಥವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.
Kannada BSI Bible 2016
ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅಂಧಕಾರದ ದಿನಗಳು ಬಹಳವೆಂದು ನೆನಪಿಗೆ ತರಲಿ. ಮುಂದಾಗುವದೆಲ್ಲಾ ವ್ಯರ್ಥವೇ.
Kannada Bible (KNCL) BSI 2016
ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ಅನೇಕ ವರ್ಷಗಳು ಬದುಕಿ, ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, ಏಕೆಂದರೆ ಅಂಥ ದಿನಗಳು ಬಹಳ. ಮುಂದಾಗುವುದೆಲ್ಲವೂ ವ್ಯರ್ಥವೇ.