Ecclesiastes 11:9 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.
Kannada BSI Bible 2016
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.