Ecclesiastes 12:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
Kannada BSI Bible 2016
ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
Kannada Bible (KNCL) BSI 2016
ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.