Ecclesiastes 12:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ಞಾನಿಯ ನುಡಿಗಳು ಪ್ರಾಣಿಗಳನ್ನು ಮುನ್ನಡೆಸುವ ಚಾವಟಿಗಳಂತಿವೆ. ಅವನ ಉಪದೇಶಗಳು ಮುರಿಯದ ಮೊಳೆಗಳಂತಿವೆ. ಅವುಗಳೆಲ್ಲ ಒಬ್ಬನೇ ಕುರುಬನಿಂದ (ದೇವರಿಂದ) ಬಂದಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
Kannada BSI Bible 2016
ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು; ಸಂಗ್ರಹವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು; ಒಬ್ಬನೇ ಕರ್ತನಿಂದ ಬಂದಿವೆ.
Kannada Bible (KNCL) BSI 2016
ಜ್ಞಾನಿಗಳ ನುಡಿಗಳು ಮೊನೆಗೋಲುಗಳು, ಅವರು ಸಂಗ್ರಹಿಸಿದ ವಚನಗಳು ಬಿಗಿಯಾಗಿ ಜಡಿದ ಮೊಳೆಗಳು. ಅವುಗಳ ಮೂಲಕರ್ತನು ಎಲ್ಲರ ಏಕೈಕ ಮೇಷಪಾಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ.