Ecclesiastes 12:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು. (Verses 13-14)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
Kannada BSI Bible 2016
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಷಯವು ತೀರಿತು; ಎಲ್ಲವೂ ಕೇಳಿ ಮುಗಿಯಿತು; ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು; ಮನುಷ್ಯರೆಲ್ಲರ [ಕರ್ತವ್ಯವು] ಇದೇ.
Kannada Bible (KNCL) BSI 2016
ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.