Ecclesiastes 12:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಮುದುಕನಾದಾಗ, ಸೂರ್ಯ, ಚಂದ್ರ, ನಕ್ಷತ್ರಗಳ ಬೆಳಕು ನಿನಗೆ ಕತ್ತಲೆಯಂತೆ ಕಾಣುತ್ತದೆ. ಮಳೆಯಾದ ಮೇಲೆಯೂ ಮತ್ತೆಮತ್ತೆ ಮೋಡಗಳಂತೆ ನಿನ್ನ ಜೀವನದಲ್ಲಿ ಕಷ್ಟಗಳು ತುಂಬಿರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.
Kannada BSI Bible 2016
ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಕತ್ತಲಾಗದಿರುವಾಗಲೇ ಮಳೆಯ ಮೋಡ ಗಳು ತಿರಿಗಿ ಬರುವದಕ್ಕಿಂತ ಮುಂಚೆಯೇ ಆತನನ್ನು ಸ್ಮರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಷ್ಟದ ದಿನಗಳಲ್ಲಿ ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಮೊಬ್ಬಾಗುವವು; ಮಳೆಯಾದ ಮೇಲೆಯೂ ಮೋಡಗಳು ಮತ್ತೆ ಬರುವವು.
Kannada Bible (KNCL) BSI 2016
ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯ ಚಂದ್ರ ನಕ್ಷತ್ರಗಳೂ ನಿನಗೆ ಮೊಬ್ಬಾಗಿ, ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು.