Ecclesiastes 12:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ, ನಿನ್ನ ಬಲಿಷ್ಠವಾದ ತೋಳುಗಳು ಶಕ್ತಿಯನ್ನು ಕಳೆದುಕೊಳ್ಳುತ್ತವೆ; ನಿನ್ನ ಬಲಿಷ್ಠವಾದ ಕಾಲುಗಳು ಬಲಹೀನವಾಗಿ ಬಗ್ಗಿಹೋಗುತ್ತವೆ; ನಿನ್ನ ಹಲ್ಲುಗಳು ಬಿದ್ದುಹೋಗುತ್ತವೆ; ಆಗ ನೀನು ಆಹಾರವನ್ನು ಅಗಿದು ತಿನ್ನಲಾರೆ. ನಿನ್ನ ಕಣ್ಣುಗಳು ಮೊಬ್ಬಾಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
Kannada BSI Bible 2016
ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬೊಗ್ಗುವರು, ಅರೆಯುವವರು ಕೊಂಚವಾದದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
Kannada Bible (KNCL) BSI 2016
ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಮನೆ ಕಾಯುವವರು ನಡುಗುವರು. ಬಲವಾದ ಮನುಷ್ಯರು ಸಹ ತಾವಾಗಿಯೇ ಬಗ್ಗುವರು. ಅರೆಯುವವರು ಕೆಲವರೇ ಉಳಿದಿರುವುದರಿಂದ ಸುಮ್ಮನಿರುವರು. ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.