Ecclesiastes 12:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಕಿವಿ ಮಂದವಾಗುತ್ತದೆ. ನೀನು ಮಾರುಕಟ್ಟೆಯ ಶಬ್ದವನ್ನೂ ಕೇಳಲಾರೆ. ಅರೆಯುವ ಕಲ್ಲು ಸಹ ನಿನಗೆ ತುಂಬ ಮೌನವಾಗಿದೆಯೋ ಎಂಬಂತೆ ತೋರುವುದು. ಗಾಯನವೂ ನಿನಗೆ ಕೇಳುವುದಿಲ್ಲ. ನಿನಗೆ ನಿದ್ರೆಬಾರದಿರುವುದರಿಂದ ಕೇವಲ ಒಂದು ಹಕ್ಕಿಯ ಧ್ವನಿಯು ನಿನ್ನನ್ನು ಹೊತ್ತಾರೆಯಲ್ಲಿ ಎಬ್ಬಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.
Kannada BSI Bible 2016
ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೀದಿಯ ಬಾಗಿಲುಗಳು ಮುಚ್ಚಿರುವವು; ಅರೆಯುವ ಸ್ಥಳದ ಶಬ್ದವು ತಗ್ಗಿ ಹಕ್ಕಿಯ ಧ್ವನಿಯಷ್ಟು ಕೀರ್ಲಾಗುವದು; ಗಾಯಕಿಯರೆಲ್ಲಾ ಕುಗ್ಗುವರು.
Kannada Bible (KNCL) BSI 2016
ಕಿವಿಗಳು ಮಂದವಾಗಿ ಹಾದಿಬೀದಿಗಳ ಶಬ್ದವು ಕೇಳಿಸವು. ಬೀಸುವ ಶಬ್ದವು ತಗ್ಗಿ ಹಕ್ಕಿಯ ಶಬ್ದಗಳಷ್ಟು ಕಿರಿದಾಗುವುದು; ಬೀಸುವವರ ಹಾಡೆಲ್ಲಾ ಕುಗ್ಗಿಹೋಗುವುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೀದಿ ಬಾಗಿಲುಗಳು ಮುಚ್ಚಿರುವುವು, ಅರೆಯುವ ಶಬ್ದವು ಕಡಿಮೆಯಾಗುವುದು; ಪಕ್ಷಿಯ ಶಬ್ದವಾದಾಗ ಎದ್ದೇಳುವುದು ತಡವಾಗುವುದು. ಮುಂಜಾನೆಯ ಗಾನಸ್ವರ ಮಂದವಾಗುವುದು.