Ecclesiastes 12:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಪ್ರಿಯತಮತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
Kannada BSI Bible 2016
ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆ ದಿನಗಳಲ್ಲಿ ದಿನ್ನೆ ಕಂಡರೆ ಭಯ, ದಾರಿಯಲ್ಲಿ ಅಪಾಯ; ಬಾದಾವಿುಯ ಮರವು ಹೂಬಿಡುವದು; ವಿುಡತೆಯು ಕೂಡ ಭಾರವಾಗುವದು; ಆಶೆಯು ಕುಂದುವದು, ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವದಕ್ಕಿದ್ದಾನಲ್ಲಾ; ಗೋಳಾಟದವರು ಬೀದಿಯಲ್ಲಿ ತಿರುಗುವರು.
Kannada Bible (KNCL) BSI 2016
ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.