Ecclesiastes 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಜೀವನ ಮುಖ್ಯವಾದದ್ದು. ನಿನ್ನ ಜೀವನ ಬೆಳ್ಳಿಬಂಗಾರಗಳಂತೆ ಬೆಲೆಬಾಳುವಂಥದ್ದು. ಆದರೆ, ಅದು ಬಹುಬೇಗನೆ ತುಂಡಾದ ದಾರದಂತೆಯೂ ಮುರಿದುಹೋದ ಪಾತ್ರೆಯಂತೆಯೂ ಆಗುವುದು. ನಿನ್ನ ಜೀವನ ಬಾವಿಯಲ್ಲಿ ಒಡೆದುಹೋದ ಬಿಂದಿಗೆಯಂತೆ ನಿಷ್ಟ್ರಯೋಜಕವಾಗುವುದು. ನಿನ್ನ ಜೀವನವು, ಬಾವಿಯ ಕಟ್ಟೆಯ ಮೇಲೆ ಮುಚ್ಚಿದ್ದ ಚಪ್ಪಡಿಕಲ್ಲು ತಾನೇ ಒಡೆದು ಬಾವಿಯೊಳಗೆ ಬಿದ್ದು ಹೋದಂತೆ ನಿಷ್ಪ್ರಯೋಜಕವಾಗುವುದು. ಆದ್ದರಿಂದಲೇ ಯೌವನ ಪ್ರಾಯದಲ್ಲಿರುವಾಗಲೇ ನೀನು ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,
Kannada BSI Bible 2016
ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಮುಂದೆ ಬೆಳ್ಳಿಯ ತಂತಿ ಕಿತ್ತು ಚಿನ್ನದ ಬಟ್ಟಲು ಜಜ್ಜಿಹೋಗುವದು; ಮಡಕೆ ಬುಗ್ಗೆಯ ಹತ್ತಿರ ಒಡೆಯುವದು; ಬಾವಿಯ ರಾಟೆ ಮುರಿಯುವದು;
Kannada Bible (KNCL) BSI 2016
ಬೆಳ್ಳಿಯ ಸರ ಕಿತ್ತುಹೋಗುವುದು, ಚಿನ್ನದಬಟ್ಟಲು ಜಜ್ಜಿಹೋಗುವುದು; ಮಡಕೆ ಬುಗ್ಗೆಯ ಹತ್ತಿರವೆ ಒಡೆಯುವುದು, ಬಾವಿಯ ರಾಟೆ ಮುರಿಯುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳ್ಳಿಯಂತ ಸರ ಕಿತ್ತುಹೋಗುವುದು, ಬಂಗಾರದಂತ ಬಟ್ಟಲು ಜಜ್ಜಿ ಹೋಗುವುದು. ಮಣ್ಣಿನ ಮಡಕೆಯು ಬುಗ್ಗೆಯ ಹತ್ತಿರ ಒಡೆದು ಹೋಗುವುದು. ಬಾವಿಯ ರಾಟೆ ಮುರಿಯುವುದು.