Ecclesiastes 2:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟು ಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.
Kannada BSI Bible 2016
ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಜ್ಞಾನದಿಂದಲೂ ತಿಳುವಳಿಕೆಯಿಂದಲೂ ತನ್ನ ಕೆಲಸವನ್ನು ನಡಿಸಿ ಸಾಫಲ್ಯಕ್ಕೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಬಾಧ್ಯತೆಯಾಗಿ ಬಿಡಬೇಕಾಗುವದು. ಇದು ಸಹ ವ್ಯರ್ಥವೂ ಕೇವಲ ಅನ್ಯಾಯವೂ ಆಗಿದೆ.
Kannada Bible (KNCL) BSI 2016
ಒಬ್ಬನು ಜ್ಞಾನದಿಂದಲೂ ತಿಳುವಳಿಕೆ ಇಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ಮನುಷ್ಯನು ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ಕೌಶಲಯುತವಾಗಿಯೂ ತನ್ನ ಕೆಲಸ ಮಾಡಬಹುದು. ಅನಂತರ ತನಗಿರುವುದೆಲ್ಲವನ್ನು ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡಬೇಕಾಗುತ್ತದೆ. ಇದೂ ವ್ಯರ್ಥವೂ ದೊಡ್ಡ ವ್ಯಸನವೂ ಆಗಿವೆ.