Ecclesiastes 2:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ.
Kannada BSI Bible 2016
ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ದಿನಗಳೆಲ್ಲಾ ವ್ಯಸನಮಯವೇ, ಅವನ ಕೆಲಸವು ತೊಂದರೆಯೇ; ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ನಿಲುಗಡೆಯಿಲ್ಲ. ಇದೂ ವ್ಯರ್ಥ.
Kannada Bible (KNCL) BSI 2016
ಅವನ ಮನಸ್ಸಿಗೆ ನೆಮ್ಮದಿ ಇಲ್ಲ, ಇದು ಸಹ ವ್ಯರ್ಥವೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ದಿನಗಳೆಲ್ಲಾ ವ್ಯಸನವೇ. ಅವನ ಪ್ರಯಾಸವು ದುಃಖವೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಕೂಡ ವ್ಯರ್ಥವೇ.