Ecclesiastes 2:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು. (Verses 24-25)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.
Kannada BSI Bible 2016
ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬದನ್ನೂ ಕಂಡುಕೊಂಡೆನು.
Kannada Bible (KNCL) BSI 2016
ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.