Ecclesiastes 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.
Kannada BSI Bible 2016
ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆನು; [ಇವರಿಂದ] ಹುಟ್ಟು ಗುಲಾಮರು ಉಂಟಾದರು; ಇದಲ್ಲದೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಲು ದನಕುರಿಗಳ ಧನವುಳ್ಳವನಾದೆನು;
Kannada Bible (KNCL) BSI 2016
ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆ. ಇವರಿಗಾದ ಮಕ್ಕಳು ನನಗೆ ಹುಟ್ಟುಗುಲಾಮರಾದರು. ಇದಲ್ಲದೆ ಜೆರುಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ದನಕುರಿಗಳು ನನಗಾದವು; ನಾನು ಧನವಂತನಾದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ದಾಸ, ದಾಸಿಯರನ್ನು ಕೊಂಡುಕೊಂಡೆನು. ನನ್ನ ಮನೆಯಲ್ಲಿ ಜನಿಸಿದ ಇತರ ಗುಲಾಮರು ಸಹ ಇದ್ದರು. ನನಗಿಂತ ಮುಂಚೆ ಯೆರೂಸಲೇಮಿನಲ್ಲಿ, ಇದ್ದವರೆಲ್ಲರಿಗಿಂತಲೂ ಹೆಚ್ಚಾಗಿ ಬಹಳ ಸಂಪತ್ತು ಉಳ್ಳವನಾಗಿ ಹೆಚ್ಚು ದನಕುರಿಗಳ ಮಂದೆಗಳನ್ನು ಹೊಂದಿದೆನು.