Ecclesiastes 2:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ಬೆಳ್ಳಿಬಂಗಾರಗಳನ್ನು ನನಗೋಸ್ಕರ ಸಂಗ್ರಹಿಸಿದೆ; ರಾಜರುಗಳಿಂದಲೂ ಅವರ ದೇಶಗಳಿಂದಲೂ ಭಂಡಾರಗಳನ್ನು ತೆಗೆದುಕೊಂಡೆ. ನನಗೋಸ್ಕರ ಹಾಡಲು ಗಾಯಕಗಾಯಕಿಯರಿದ್ದರು. ನನ್ನನ್ನು ಸಂತೋಷಪಡಿಸಲು ಅನೇಕ ಉಪಪತ್ನಿಯರಿದ್ದರು. ಮನುಷ್ಯನು ಬಯಸಬಹುದಾದ ಪ್ರತಿಯೊಂದನ್ನೂ ನಾನು ಪಡೆದಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.
Kannada BSI Bible 2016
ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಬೆಳ್ಳಿ ಬಂಗಾರಗಳನ್ನೂ ಅರಸರ ನಜರನ್ನೂ ದಿಗ್ದೇಶಗಳಿಂದ ಕಪ್ಪವನ್ನೂ ಸಂಗ್ರಹಿಸಿಕೊಂಡೆನು; ಗಾಯಕಗಾಯಕಿಯರನ್ನೂ ಮನುಷ್ಯರಿಗೆ ಭೋಗ್ಯರಾದ ಅನೇಕ ಉಪಪತ್ನಿಯರನ್ನೂ ಸಂಪಾದಿಸಿಕೊಂಡೆನು.
Kannada Bible (KNCL) BSI 2016
ಬೆಳ್ಳಿಬಂಗಾರಗಳನ್ನೂ ಅರಸರ ಹಾಗೂ ಸಾಮಂತರ ಕಪ್ಪಕಾಣಿಕೆಗಳನ್ನೂ ಶೇಖರಿಸಿಕೊಂಡೆ. ಗಾಯಕಗಾಯಕಿಯರೂ ಭೋಗವಿಲಾಸಕ್ಕಾಗಿ ಹಲವಾರು ಉಪಪತ್ನಿಯರೂ ನನಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬೆಳ್ಳಿಬಂಗಾರಗಳನ್ನು, ಅರಸರ ಮತ್ತು ಪ್ರಾಂತಗಳ ವಿಶೇಷ ಸಂಪತ್ತನ್ನು ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗವಿಲಾಸಕ್ಕಾಗಿ ಅನೇಕ ಉಪಪತ್ನಿಯರನ್ನು ಸಂಪಾದಿಸಿಕೊಂಡೆನು.