Ecclesiastes 3:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ಮನಸ್ಸಿನಲ್ಲಿ, “ದೇವರು ಪ್ರತಿಯೊಂದಕ್ಕೂ ಸಮಯವನ್ನು ಗೊತ್ತುಪಡಿಸಿದ್ದಾನೆ. ಜನರು ಮಾಡುವ ಪ್ರತಿಯೊಂದಕ್ಕೂ ನ್ಯಾಯತೀರಿಸಲು ಆತನು ಸಮಯವನ್ನು ಗೊತ್ತುಪಡಿಸಿದ್ದಾನೆ. ದೇವರು ನೀತಿವಂತರಿಗೂ ದುಷ್ಟರಿಗೂ ನ್ಯಾಯತೀರಿಸುವನು” ಎಂದುಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.
Kannada BSI Bible 2016
ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ಮನಸ್ಸಿನಲ್ಲಿ - ದೇವರು ಧರ್ಮಿಗಳಿಗೂ ಅಧರ್ಮಿಗಳಿಗೂ ನ್ಯಾಯತೀರಿಸುವನು.; ಆತನ ನ್ಯಾಯಕ್ರಮದಲ್ಲಿ ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯವುಂಟಲ್ಲವೆ ಅಂದುಕೊಂಡೆನು.
Kannada Bible (KNCL) BSI 2016
ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, “ನೀತಿವಂತರನ್ನೂ ದುಷ್ಟರನ್ನೂ ದೇವರು ನ್ಯಾಯತೀರಿಸುವನು. ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.”