Ecclesiastes 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲದೆ ಮನಸ್ಸಿನಲ್ಲಿ ಹೀಗೆಂದುಕೊಂಡೆನು: “ಮನುಷ್ಯರು ಪ್ರಾಣಿಗಳಿಗಿಂತ ಮೇಲಾದವರಲ್ಲ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂಬುದು ದೇವರ ಇಷ್ಟವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು, “ದೇವರು ಮನುಷ್ಯರನ್ನು ಪರೀಕ್ಷಿಸಿ, ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ.”
Kannada BSI Bible 2016
ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೆ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು - ದೇವರು ಮನುಷ್ಯರನ್ನು ಪರೀಕ್ಷಿಸುವದಕ್ಕೂ ಮನುಷ್ಯರು ಪಶುಪ್ರಾಯರಾಗಿದ್ದೇವೆಂದು ತಾವೇ ಗ್ರಹಿಸಿಕೊಳ್ಳುವದಕ್ಕೂ ಆಸ್ಪದವಾಗುವಂತೆ ಇದು ನರಜನ್ಮದವರ ನಿವಿುತ್ತವಾಗಿ ಆಯಿತಲ್ಲವೆ.
Kannada Bible (KNCL) BSI 2016
ಮತ್ತೆ ಮನಸ್ಸಿನಲ್ಲೇ ಮಾನವರ ಪರಿಸ್ಥಿತಿಯ ಬಗ್ಗೆ ಆಲೋಚನೆ ಮಾಡಿದೆ; ಮನುಷ್ಯರು ಪಶುಗಳಿಗೆ ಸಮಾನರೆಂದು ತಾವೇ ಗ್ರಹಿಸಿಕೊಳ್ಳುವುದಕ್ಕೆ ಆಸ್ಪದವಾಗುವಂತೆ ದೇವರು ಮನುಷ್ಯರನ್ನು ಪರೀಕ್ಷಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ.