Ecclesiastes 3:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು. ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ “ಉಸಿರು.” ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.
Kannada BSI Bible 2016
ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವದು; ಎಲ್ಲಕ್ಕೂ ಪ್ರಾಣ ಒಂದೇ; ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ; ಎಲ್ಲಾ ಬರೀ ಗಾಳಿಯೇ.
Kannada Bible (KNCL) BSI 2016
ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುತ್ತದೆ. ಎಲ್ಲಕ್ಕೂ ಇರುವ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವೂ ವ್ಯರ್ಥವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ.