Ecclesiastes 3:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಮನುಷ್ಯನಿಗೆ ತನ್ನ ಕಾರ್ಯದಲ್ಲಿ ಸಂತೋಷಪಡುವುದಕ್ಕಿಂತ ಬೇರೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಅಲ್ಲದೆ ಮುಂದಿನ ಕಾಲವನ್ನು ಕುರಿತು ಮನುಷ್ಯನು ಚಿಂತಿಸಬಾರದು. ಯಾಕೆಂದರೆ ಅವನ ಜೀವಮಾನದ ನಂತರ ಸಂಭವಿಸುವಂಥವುಗಳನ್ನು ನೋಡಲು ಈ ಲೋಕಕ್ಕೆ ಅವನನ್ನು ಯಾರು ಬರಮಾಡುವರು?”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?
Kannada BSI Bible 2016
ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪ್ರಕಾರ ನಾನು ಯೋಚಿಸಿ, ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ; ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದನಂತರ ಸಂಭವಿಸುವವುಗಳನ್ನು ನೋಡುವದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?
Kannada Bible (KNCL) BSI 2016
ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?