Ecclesiastes 4:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.
Kannada BSI Bible 2016
ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.
Kannada Bible (KNCL) BSI 2016
ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.