Ecclesiastes 4:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಬ್ಬರು ಒಟ್ಟಿಗೆ ಮಲಗಿಕೊಂಡರೆ ಅವರಿಬ್ಬರಿಗೂ ಬೆಚ್ಚಗಾಗುವುದು; ಆದರೆ ಒಬ್ಬಂಟಿಗನಿಗೆ ಬೆಚ್ಚಗಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?
Kannada BSI Bible 2016
ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಒಬ್ಬನ ಮಗ್ಗುಲಲ್ಲೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾಗುವದು; ಒಂಟಿಗನಿಗೆ ಹೇಗೆ ಬೆಚ್ಚಗಾದೀತು.
Kannada Bible (KNCL) BSI 2016
ಇದಲ್ಲದೆ, ಒಬ್ಬನ ಮಗ್ಗುಲಲ್ಲಿ ಇನ್ನೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾದೀತು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ. ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ?

Recommended Reading