Ecclesiastes 4:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದುವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.
Kannada BSI Bible 2016
ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬೊಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಎದುರಾಗಿ ನಿಲ್ಲಬಹುದು; ಮೂರು ಹುರಿಯ ಹಗ್ಗ ಬೇಗ ಕಿತ್ತು ಹೋಗುವದಿಲ್ಲವಷ್ಟೆ.
Kannada Bible (KNCL) BSI 2016
ಒಬ್ಬಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಕೂಡ ಎದುರಾಗಿ ನಿಲ್ಲಬಹುದು. ಮೂರು ಹುರಿಗಳಿಂದ ಹೆಣೆದ ಹಗ್ಗ ಸುಲಭವಾಗಿ ಕಿತ್ತುಹೋಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬಂಟಿಗನ ಮೇಲೆ ಜಯ ಸಾಧಿಸಲು, ಇಬ್ಬರು ಎದುರಾಗಿ ನಿಲ್ಲಬಹುದು. ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.