Ecclesiastes 4:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಗಮನಿಸಿದ ಪ್ರಕಾರ ಜನರು ಆ ಯೌವನಸ್ಥನ ಪಕ್ಷವಹಿಸುವರು. ಅವನು ಹೊಸರಾಜನಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು.
Kannada BSI Bible 2016
ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನು.ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರ್ಯನ ಕೆಳಗೆ ಚಲಿಸುವ ಜೀವಂತರೆಲ್ಲಾ ರಾಜನಿಗೆ ಪ್ರತಿಯಾಗಿ ನಿಂತ ಯುವಕನಾದ ಈ ಎರಡನೆಯವನ ಪಕ್ಷ ವಹಿಸುವದನ್ನು ನೋಡಿದೆನು.
Kannada Bible (KNCL) BSI 2016
ಜಗತ್ತಿನಲ್ಲಿ ಬದುಕಿದ್ದ ಜೀವಂತರೆಲ್ಲರು ರಾಜನಿಗೆ ಪ್ರತಿಯಾಗಿ ನಿಂತ ಆ ಯುವಕನ ಪಕ್ಷ ವಹಿಸುವುದನ್ನು ಕಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯನ ಕೆಳಗೆ ಜೀವಿಸಿ ನಡೆದಾಡಿದವರೆಲ್ಲರೂ ಅರಸನ ಪ್ರತಿಯಾಗಿ ಯುವಕನನ್ನು ಹಿಂಬಾಲಿಸಿದ್ದನ್ನೂ ನಾನು ನೋಡಿದೆನು.