Ecclesiastes 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನೇಕಾನೇಕ ಜನರು ಆ ಯೌವನಸ್ಥನಿಗೆ ಬೆಂಬಲನೀಡುವರು. ಆದರೆ ಕೊನೆಗಾಲದಲ್ಲಿ ಅವರೇ ಅವನನ್ನು ಇಷ್ಟಪಡುವುದಿಲ್ಲ. ಇದು ಸಹ ಗಾಳಿಯನ್ನು ಹಿಂದಟ್ಟಿದಂತೆ ವ್ಯರ್ಥ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ.
Kannada BSI Bible 2016
ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಆಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಇವನ ಆಳಿಕೆಯ ಕೊನೆಗಾಲದವರಾದರೋ ಇವನಲ್ಲಿ ಆನಂದಿಸಲಿಲ್ಲ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.
Kannada Bible (KNCL) BSI 2016
ಇವನ ಅಧಿಪತ್ಯಕ್ಕೆ ಒಳಪಟ್ಟ ಜನಜಂಗುಳಿಯ ಸಂಖ್ಯೆ ಅಪಾರವಾಗಿತ್ತು. ಇವನ ನಂತರ ಬಂದವರಾದರೋ ಇವನ ಬಗ್ಗೆ ಅಭಿಮಾನ ತೋರಲಿಲ್ಲ. ಇದು ಸಹ ವ್ಯರ್ಥ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ಆಧಿಪತ್ಯಕ್ಕೆ ಒಳಪಟ್ಟ ಜನರ ಸಂಖ್ಯೆಯು ಅಪಾರ. ಆದರೆ ಯುವಕನ ಆಳ್ವಿಕೆಯ ಮುಂಚೆ ಇದ್ದವರು ಮತ್ತು ತರುವಾಯ ಬಂದವರು ಇವನನ್ನು ಮೆಚ್ಚಲಿಲ್ಲ. ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ ವ್ಯರ್ಥವೇ.