Ecclesiastes 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹುಟ್ಟುವಾಗಲೇ ಸತ್ತು ಹೋದವರಿಗೆ ಒಳ್ಳೆಯದೇ ಆಯಿತು! ಯಾಕೆಂದರೆ ಈ ಲೋಕದಲ್ಲಿ ನಡೆಯುವ ಕೆಟ್ಟದ್ದನ್ನು ಅವರು ನೋಡಲೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು.
Kannada BSI Bible 2016
ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ಈ ಉಭಯರಿಗಿಂತಲೂ ಇನ್ನು ಹುಟ್ಟದೆ ಲೋಕದಲ್ಲಿನ ಅಧರ್ಮವನ್ನು ನೋಡದೆ ಇರುವವನೇ ಲೇಸೆಂದು ತಿಳಿದುಕೊಂಡೆನು.
Kannada Bible (KNCL) BSI 2016
ಹೌದು, ಉಭಯರಿಗಿಂತಲೂ ಇನ್ನೂ ಹುಟ್ಟದೆ, ಜಗದಲ್ಲಿನ ಅಧರ್ಮವನ್ನು ಕಾಣದೆ ಇರುವವನು ಮತ್ತಷ್ಟು ಭಾಗ್ಯವಂತನೆಂದು ತಿಳಿದುಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇವರಿಬ್ಬರಿಗಿಂತಲೂ ಇನ್ನೂ ಹುಟ್ಟದೇ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಶ್ರೇಷ್ಠನು.