Ecclesiastes 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದೇನೊ ನಿಜವಿರಬಹುದು. ಆದರೆ ದುರಾಶೆಪಡುವುದಕ್ಕಿಂತ ಇರುವುದರಲ್ಲಿ ತೃಪ್ತರಾಗಿರುವುದೇ ಮೇಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.
Kannada BSI Bible 2016
ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಳಿಯನ್ನು ಹಿಂದಟ್ಟುವ ವ್ಯರ್ಥ ಪ್ರಯಾಸದ ಬೊಗಸೆಗಿಂತಲೂ ನೆಮ್ಮದಿಯ ಸೇರೆಯೇ ಲೇಸು.
Kannada Bible (KNCL) BSI 2016
ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎರಡು ಕೈಹಿಡಿ ವ್ಯರ್ಥ ಪರಿಶ್ರಮಕ್ಕಿಂತ ಒಂದೇ ಕೈಹಿಡಿಯಷ್ಟು ಸಂಪಾದನೆ ಪಡೆದು ನೆಮ್ಮದಿಯಿಂದಿರುವುದು ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಿಂದ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.