Ecclesiastes 5:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡುವುದೇ ಉತ್ತಮ. ಮೂಢರು ದುಷ್ಕೃತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.
Kannada BSI Bible 2016
ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವದು ಲೇಸು; ತಾವು ಮಾಡುವದು ಅಧರ್ಮವೆಂದು ಮೂಢರಿಗೆ ಗೊತ್ತೇ ಇಲ್ಲ.
Kannada Bible (KNCL) BSI 2016
ನೀನು ದೇವಾಲಯವನ್ನು ಪ್ರವೇಶಿಸುವಾಗ ಎಚ್ಚರಿಕೆವಹಿಸು. ಮೂಢರು ಅರ್ಪಿಸುವ ಬಲಿಗಿಂತ ದೇವರ ಸಾನ್ನಿಧ್ಯ ಸೇರಿ ಕಿವಿಗೊಟ್ಟು ಆಲಿಸುವುದು ಲೇಸು. ತಾವು ಮಾಡುವುದು ಸರಿಯಲ್ಲ ಎಂದು ಆ ಮೂಢರಿಗೆ ತಿಳಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ.