Ecclesiastes 5:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಐಶ್ವರ್ಯ ಹೆಚ್ಚಿದಂತೆಲ್ಲಾ “ಅನುಭವಿಸುವವರ” ಸಂಖ್ಯೆಯೂ ಹೆಚ್ಚುವುದು. ಐಶ್ವರ್ಯವಂತನು ಅದನ್ನು ಕಣ್ಣಿಂದ ನೋಡಬಹುದಷ್ಟೇ ಹೊರತು ಬೇರೆ ಯಾವ ಲಾಭವೂ ಅವನಿಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಸ್ತಿ ಹೆಚ್ಚಾದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚಾಗುವುದು. ಅದನ್ನು ಕಣ್ಣಿನಿಂದ ನೋಡುವುದೇ ಹೊರತು ಯಜಮಾನನಿಗೆ ಇನ್ಯಾವ ಲಾಭವೂ ಇಲ್ಲ.
Kannada BSI Bible 2016
ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊತ್ತು ಹೆಚ್ಚಿದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚುವದು; ಅದನ್ನು ಕಣ್ಣಿಂದ ನೋಡುವದೇ ಹೊರತು ಯಜಮಾನನಿಗೆ ಇನ್ನಾವ ಲಾಭವೂ ಇಲ್ಲ.
Kannada Bible (KNCL) BSI 2016
ಸಿರಿಸಂಪತ್ತು ಹೆಚ್ಚಿದಂತೆ ಅನುಭವಿಸುವವರ ಸಂಖ್ಯೆಯೂ ಹೆಚ್ಚುತ್ತದೆ. ಯಜಮಾನನಿಗೆ ತಾನು ಐಶ್ವರ್ಯವಂತನೆಂಬ ಭಾವನೆಯ ಹೊರತು ಮತ್ತಾವ ಲಾಭವು ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊತ್ತು ಹೆಚ್ಚಿದರೆ, ಅದನ್ನು ಅನುಭವಿಸುವವರು ಹೆಚ್ಚಾಗುವರು. ಯಜಮಾನರು ಅದನ್ನು ತಮ್ಮ ಕಣ್ಣಿಂದ ನೋಡುವುದೇ ಅವರಿಗಾಗುವ ಲಾಭ, ಬೇರೆ ಯಾವ ಪ್ರಯೋಜನವಿದೆ?