Ecclesiastes 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಲೋಕದಲ್ಲಿ ದುರ್ಗತಿಯೊಂದನ್ನು ನೋಡಿದ್ದೇನೆ. ಒಬ್ಬನು ತನ್ನ ಭವಿಷ್ಯತ್ತಿಗಾಗಿ ಹಣವನ್ನು ಕೂಡಿಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.
Kannada BSI Bible 2016
ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದಲ್ಲಿ ಕೇವಲ ಈ ದುರ್ದಶೆಯನ್ನು ನೋಡಿದೆನು; ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವದರಲ್ಲಿಯೇ ಕೊರಗುತ್ತಿರುವನು;
Kannada Bible (KNCL) BSI 2016
ಲೋಕದಲ್ಲಿ ನಾನು ಮತ್ತೊಂದು ಕೇಡನ್ನು ಕಂಡೆ. ಅದೇನೆಂದರೆ, ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲೇ ಕೊರಗುತ್ತಿರುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ.