Ecclesiastes 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನುಷ್ಯನು ತಾಯಿಯ ಗರ್ಭದಿಂದ ಬರಿದಾಗಿ ಈ ಲೋಕಕ್ಕೆ ಬರುವನು; ಸಾಯುವಾಗ ಅದೇ ರೀತಿ ಬರಿದಾಗಿ ಹೋಗುವನು; ತಾನು ಪ್ರಯಾಸಪಟ್ಟು ಸಂಪಾದಿಸಿದವುಗಳಲ್ಲಿ ಒಂದನ್ನೂ ಅವನು ತನ್ನೊಡನೆ ತೆಗೆದುಕೊಂಡು ಹೋಗಲಾರನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.
Kannada BSI Bible 2016
ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿಹೋಗುವನು; ಅವನು ಪ್ರಯಾಸಪಟ್ಟದ್ದಕ್ಕೆಲ್ಲಾ ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗನು.
Kannada Bible (KNCL) BSI 2016
ತಾಯಿಯ ಗರ್ಭದಿಂದ ಹೇಗೆ ಬರಿಗೈಯಲ್ಲಿ ಬಂದನೋ ಹಾಗೇ ಬರಿಗೈಯಲ್ಲಿ ಗತಿಸಿಹೋಗುತ್ತಾನೆ. ಅವನು ಪಟ್ಟ ಎಲ್ಲ ಪ್ರಯಾಸಕ್ಕಾಗಿ ತನ್ನ ಕೈಯಲ್ಲಿ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾಯಿಯ ಗರ್ಭದಿಂದ ಅವನು ಹೇಗೆ ಬರಿಗೈಯಲ್ಲಿ ಬಂದನೋ, ಹಾಗೆ ಬರಿಗೈಯಲ್ಲಿ ಗತಿಸಿ ಹೋಗುವನು. ಅವನು ಪ್ರಯಾಸ ಪಟ್ಟದ್ದಕ್ಕಾಗಿ ಯಾವುದನ್ನು ತೆಗೆದುಕೊಂಡು ಹೋಗುವುದಿಲ್ಲ.