Ecclesiastes 5:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಜೀವಮಾನವೆಲ್ಲಾ ವ್ಯಸನದಿಂದಲೂ ದುಃಖದಿಂದಲೂ ಕೂಡಿದೆ. ನಿರಾಶೆಯೂ ಕಾಯಿಲೆಯೂ ಕೋಪವೂ ಅವನನ್ನು ಕಾಡುತ್ತಲೇ ಇರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.
Kannada BSI Bible 2016
ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಜೀವಮಾನವೆಲ್ಲಾ ಅವನ ಊಟದಲ್ಲಿ ಕತ್ತಲು ಕವಿದಿರುವದು; ಅವನಿಗೆ ಕರಕರೆಯು ಶಾನೆ; ರೋಗರೋಷಗಳು ಇದ್ದೇ ಇರುವವು.
Kannada Bible (KNCL) BSI 2016
ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಜೀವಮಾನವೆಲ್ಲಾ ಅವನು ಕತ್ತಲೆಯಲ್ಲಿ ಕಳೆಯುತ್ತಾನೆ. ಅವನಿಗೆ ವ್ಯಾಧಿಯೊಂದಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.