Ecclesiastes 5:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಒಬ್ಬನಿಗೆ ಐಶ್ವರ್ಯವನ್ನೂ ಆಸ್ತಿಯನ್ನೂ ಮತ್ತು ಅವುಗಳನ್ನು ಅನುಭವಿಸುವ ಭಾಗ್ಯವನ್ನೂ ಕೊಟ್ಟಿದ್ದರೆ ಅವನು ಅವುಗಳನ್ನು ಅನುಭವಿಸಲಿ. ಅವನು ತನಗಿರುವಂಥವುಗಳನ್ನು ಹೊಂದಿಕೊಂಡು ತನ್ನ ದುಡಿಮೆಯಲ್ಲಿ ಸಂತೋಷಿಸಲಿ. ಅದು ದೇವರ ಅನುಗ್ರಹವಷ್ಟೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.
Kannada BSI Bible 2016
ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ.ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೂ ಆತನು ಯಾವನಿಗೆ ಆಸ್ತಿಪಾಸ್ತಿಗಳನ್ನು ದಯಪಾಲಿಸುವದಲ್ಲದೆ ಅದನ್ನು ಅನುಭವಿಸಿ ಪಾಲಿಗೆ ಬಂದದ್ದನ್ನು ಹೊಂದಿ ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಡುವನೋ, ಅವನ ಸುಖವು ದೇವರ ಅನುಗ್ರಹ.
Kannada Bible (KNCL) BSI 2016
ದೇವರು ಯಾರಿಗಾದರು ಆಸ್ತಿಪಾಸ್ತಿಯನ್ನು ದಯಪಾಲಿಸಿ, ಅದನ್ನು ಅನುಭವಿಸುವ, ಪಾಲಿಗೆ ಬಂದದ್ದನ್ನು ಸವಿಯುವ, ಶ್ರಮದಲ್ಲೂ ಸಂತೋಷಪಡುವ ಶಕ್ತಿಯನ್ನು ಕೊಟ್ಟಿದ್ದರೆ ಅದು ಅವನ ಭಾಗ್ಯ; ಅದು ದೇವರ ಅನುಗ್ರಹವೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.