Ecclesiastes 5:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಿಗೆ ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ. ನೀವು ದೇವರೊಂದಿಗೆ ಮಾತಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮನೋದ್ವೇಗಗಳು ನಿಮ್ಮನ್ನು ಮಾತಿನಲ್ಲಿ ದುಡುಕಿಸದಂತೆ ನೋಡಿಕೊಳ್ಳಿ. ದೇವರು ಪರಲೋಕದಲ್ಲಿರುವುದರಿಂದ ಮತ್ತು ನೀವು ಈ ಲೋಕದಲ್ಲಿರುವುದರಿಂದ ನಿಮ್ಮ ಮಾತುಗಳು ಮಿತವಾಗಿರಲಿ. ಈ ನುಡಿ ಸತ್ಯವಾದದ್ದೇ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.
Kannada BSI Bible 2016
ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಯಿದುಡುಕಬೇಡ, ದೇವರ ಮುಂದೆ ಮಾತಾಡಲು ನಿನ್ನ ಹೃದಯದಲ್ಲಿ ಆತುರಪಡದಿರು; ದೇವರು ಆಕಾಶದಲ್ಲಿದ್ದಾನಲ್ಲವೆ, ನೀನು ಭೂವಿುಯಲ್ಲಿದ್ದೀ; ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
Kannada Bible (KNCL) BSI 2016
ದುಡುಕಿ ಮಾತನಾಡಬೇಡ. ದೇವರ ಸನ್ನಿಧಿಯಲ್ಲಿ ಮಾತುಕೊಡಲು ಆತುರಪಡಬೇಡ. ದೇವರು ಇರುವುದು ಪರಲೋಕದಲ್ಲಿ, ನೀನಿರುವುದಾದರೋ ಭೂಲೋಕದಲ್ಲಿ. ಆದುದರಿಂದ ನಿನ್ನ ಮಾತುಗಳಿಗೆ ಮಿತಿಯಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.