Ecclesiastes 5:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನ ಜೀವಿತವು ಅಲ್ಪಕಾಲದ್ದೆಂದು ಅವನು ನೆನಪುಮಾಡಿಕೊಳ್ಳಬೇಕು. ಯಾಕೆಂದರೆ ಅವನನ್ನು ಅವನಿಗೆ ಇಷ್ಟವಾದ ಕೆಲಸದಲ್ಲಿ ನಿರತನನ್ನಾಗಿ ಮಾಡಿರುವಾತನು ದೇವರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಂದುಕೊಳ್ಳುವುದಿಲ್ಲ. ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾನೆ.
Kannada BSI Bible 2016
ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಾರನು; ಇವನು ತನ್ನ ಹೃದಯಾನಂದದಲ್ಲಿ ಮಗ್ನನಾಗಿರುವಂತೆ ದೇವರು ಮಾಡಿದ್ದಾನಷ್ಟೆ.
Kannada Bible (KNCL) BSI 2016
ಇಂಥವನು ತನ್ನ ಜೀವನಾವಧಿಯನ್ನು ಗಣನೆಗೆ ತಂದುಕೊಳ್ಳನು. ಕಾರಣ, ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥವನು ತನ್ನ ಜೀವಮಾನದ ದಿನಗಳನ್ನು ಗಣನೆಗೆ ತಂದುಕೊಳ್ಳನು. ಏಕೆಂದರೆ ಇವನು ತನ್ನ ಹೃದಯಾನಂದದಲ್ಲಿ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ.