Ecclesiastes 5:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಹರಕೆ ಮಾಡಿಕೊಂಡರೆ ತಡಮಾಡದೆ ಅದನ್ನು ನೆರವೇರಿಸಿ. ಮೂಢರ ವಿಷಯದಲ್ಲಿ ದೇವರಿಗೆ ಸಂತೋಷವಿಲ್ಲ. ನೀವು ದೇವರಿಗೆ ಹರಕೆ ಮಾಡಿಕೊಂಡದ್ದನ್ನು ಸಲ್ಲಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.
Kannada BSI Bible 2016
ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದೇವರಿಗೆ ಹರಕೆಯನ್ನು ಕಟ್ಟಿದರೆ ಅದನ್ನು ತೀರಿಸಲು ತಡಮಾಡಬೇಡ; ಆತನು ಮೂಢರಿಗೆ ಒಲಿಯನು; ನಿನ್ನ ಹರಕೆಯನ್ನು ಒಪ್ಪಿಸು.
Kannada Bible (KNCL) BSI 2016
ದೇವರಿಗೆ ನೀನು ಹರಕೆಯನ್ನು ಹೊತ್ತರೆ ತೀರಿಸಲು ತಡಮಾಡಬೇಡ. ದೇವರು ಮೂಢರಿಗೆ ಒಲಿಯುವುದಿಲ್ಲ. ನಿನ್ನ ಹರಕೆಯನ್ನು ತಪ್ಪದೆ ತೀರಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರಿಗೆ ನೀನು ಹರಕೆಯನ್ನು ಮಾಡಿದರೆ, ಅದನ್ನು ತೀರಿಸಲು ತಡಮಾಡಬೇಡ. ದೇವರು ಮೂಢರನ್ನು ಮೆಚ್ಚುವುದಿಲ್ಲ. ನೀನು ಹರಕೆ ಮಾಡಿದ್ದನ್ನು ತೀರಿಸು.