Ecclesiastes 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನುಷ್ಯನು ಕೇವಲ ಮನುಷ್ಯನಾಗಿ ಸೃಷ್ಟಿಸಲ್ಪಟ್ಟಿದ್ದಾನೆ. ಅದರ ಬಗ್ಗೆ ವಾದಮಾಡುವುದರಿಂದ ಉಪಯೋಗವಿಲ್ಲ. ಅಲ್ಲದೆ ಮನುಷ್ಯನು ದೇವರೊಂದಿಗೆ ವಾದಮಾಡಲಾರನು. ಯಾಕೆಂದರೆ ದೇವರು ಮನುಷ್ಯನಿಗಿಂತಲೂ ಬಲಿಷ್ಠನಾಗಿದ್ದಾನೆ. ಆದ್ದರಿಂದ ವಾದವು ಕೇವಲ ನಿರರ್ಥಕವಾಗಿದೆ. (Verses 10-11)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.
Kannada BSI Bible 2016
ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.
Kannada Bible (KNCL) BSI 2016
ಈಗ ಇರುವ ಪ್ರತಿಯೊಂದು ಹಿಂದಿನಿಂದಲೇ ಹೆಸರುವಾಸಿಯಾಗಿದೆ. ಮನುಷ್ಯನು ಯಾರೆಂದು ಗೊತ್ತಿದೆ. ತನಗಿಂತ ಬಲಿಷ್ಠನ ಸಂಗಡ ವಾದಿಸಲು ಅವನಿಂದಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. ಮನುಷ್ಯನು ಯಾರು ಎಂದೂ ಗೊತ್ತಾಗಿದೆ. ತನಗಿಂತ ಬಲಿಷ್ಟನೊಂದಿಗೆ ಯಾರೂ ಹೋರಾಡುವುದಿಲ್ಲ.