Ecclesiastes 6:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಸೂರ್ಯನನ್ನು ನೋಡಲೇ ಇಲ್ಲ. ಅದಕ್ಕೆ ತಿಳಿವಳಿಕೆಯೂ ಇಲ್ಲ. ಆದರೆ ದೇವರು ಅನುಗ್ರಹಿಸಿದವುಗಳಲ್ಲಿ ಸಂತೋಷಪಡದವನಿಗಿಂತ ಆ ಮಗುವೇ ಹೆಚ್ಚು ವಿಶ್ರಾಂತಿಯನ್ನು ಪಡೆದುಕೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.
Kannada BSI Bible 2016
ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಸೂರ್ಯನನ್ನು ಕಂಡಿಲ್ಲ, ಅದಕ್ಕೆ ತಿಳುವಳಿಕೆಯೇ ಇಲ್ಲ; ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.
Kannada Bible (KNCL) BSI 2016
ಅದು ಸೂರ್ಯನನ್ನು ಕಂಡಿಲ್ಲ. ತಿಳುವಳಿಕೆಯೆಂಬುದು ಅದಕ್ಕೆ ಇಲ್ಲವೇ ಇಲ್ಲ. ಆದರೂ ಅದರ ನೆಮ್ಮದಿ ಸುಖಾನುಭವ ಇಲ್ಲದವನ ಪರಿಸ್ಥಿತಿಗಿಂತ ಮಿಗಿಲಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅದು ಸೂರ್ಯನನ್ನು ನೋಡಲಿಲ್ಲ, ಯಾವುದನ್ನು ಅರಿತಿರಲಿಲ್ಲ. ಆದರೂ ಅದು ಆ ಮನುಷ್ಯನಿಗಿಂತ ಹೆಚ್ಚು ವಿಶ್ರಾಂತಿ ಹೊಂದಿದೆ.