Ecclesiastes 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಜ್ಞಾನಿಯು ಮೂಢನಿಗಿಂತ ಉತ್ತಮನಲ್ಲ. ಬಡವರಾಗಿದ್ದರೂ ಜೀವನವನ್ನು ಅರ್ಥಮಾಡಿಕೊಂಡು ಜೀವಿಸುವುದೇ ಮೇಲು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು?
Kannada BSI Bible 2016
ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನಿಯಾಗಲಿ ಜನರ ಮುಂದೆ ಸರಿಯಾಗಿ ನಡೆಯಬಲ್ಲ ಬಡವನಾಗಲಿ ಮೂಢನಿಗಿಂತ ಯಾವ ವಿಷಯದಲ್ಲಿ ಶ್ರೇಷ್ಠ?
Kannada Bible (KNCL) BSI 2016
ಜ್ಞಾನಿಯಾಗಲಿ, ಜನರ ಮುಂದೆ ಸಜ್ಜನನಾಗಿ ನಡೆಯಬಲ್ಲ ಬಡವನಾಗಲಿ, ಮೂಢನಿಗಿಂತ ಹೇಗೆ ಶ್ರೇಷ್ಠ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಇತರರ ಮುಂದೆ ಹೇಗೆ ವರ್ತಿಸಬೇಕು ಎಂದು ತಿಳಿದುಕೊಳ್ಳುವುದರಿಂದ ಬಡವರಿಗೇನು ಲಾಭ?