Ecclesiastes 6:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುರಾಶೆಪಡುವುದಕ್ಕಿಂತ ಇರುವುದರಲ್ಲಿ ಸಂತೋಷಪಡುವುದೇ ಉತ್ತಮ. ದುರಾಶೆಯಿಂದ ಪ್ರಯೋಜನವಿಲ್ಲ. ಅದು ಸಹ ಗಾಳಿಯನ್ನು ಹಿಂದಟ್ಟಿದಂತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
Kannada BSI Bible 2016
ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಗೆಬಗೆಯಾಗಿ ಆಶಿಸುವದಕ್ಕಿಂತ ಕಣ್ಣೆದುರಿಗಿರುವದನ್ನು ಅನುಭವಿಸುವದೇ ಲೇಸು; ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.
Kannada Bible (KNCL) BSI 2016
ಬಗೆಬಗೆಯಾಗಿ ಬಯಸುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದೇ ಲೇಸು. ಆದರೆ ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ನಿರರ್ಥಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಚ್ಚು ಅಪೇಕ್ಷಿಸಿ ಅಲೆದಾಡುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದು ಉತ್ತಮ. ಗಾಳಿಯನ್ನು ಬೆನ್ನಟ್ಟಿದಂತೆ ಇದೂ ಕೂಡ ವ್ಯರ್ಥವೇ.