Ecclesiastes 7:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನಗೆ ಆಸ್ತಿಯಿದ್ದರೆ ಜ್ಞಾನವು ಮತ್ತಷ್ಟು ಉಪಯುಕ್ತವಾಗಿದೆ. ನಿಜವಾಗಿಯೂ ಜ್ಞಾನಿಗಳು ಐಶ್ವರ್ಯವನ್ನು ಹೇರಳವಾಗಿ ಪಡೆದುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.
Kannada BSI Bible 2016
ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನವು ಸ್ವಾಸ್ತ್ಯದಂತೆ ಪ್ರಯೋಜನಕರ; ಹೌದು, ಸ್ವಾಸ್ತ್ಯಕ್ಕಿಂತ ಜೀವಿತರಿಗೆ ಉತ್ತಮೋತ್ತಮವಾಗಿದೆ.
Kannada Bible (KNCL) BSI 2016
ಜ್ಞಾನವು ಆಸ್ತಿಗಿಂತ ಪ್ರಯೋಜನಕರ; ಜೀವಿತರಿಗೆ ಅದು ಎಷ್ಟೋ ಲಾಭಕರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು; ಅದರಿಂದ ಜೀವಂತರೆಲ್ಲರಿಗೂ ಲಾಭಕರ.