Ecclesiastes 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.
Kannada BSI Bible 2016
ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಿಯು ತನ್ನ ಧರ್ಮದಲ್ಲಿಯೇ ನಶಿಸುವದುಂಟು; ಅಧರ್ಮಿಯು ತನ್ನ ಅಧರ್ಮದಲ್ಲಿಯೇ ಬಹು ದಿನ ಬದುಕುವದುಂಟು; ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.
Kannada Bible (KNCL) BSI 2016
ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ.