Ecclesiastes 7:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನೀನು ನಿನ್ನನ್ನೇ ಯಾಕೆ ನಾಶಮಾಡಿಕೊಳ್ಳುವೆ? ಬಹಳ ನೀತಿವಂತನಾಗಿಯೂ ಇರಬೇಡ; ಬಹಳ ಕೆಟ್ಟವನಾಗಿಯೂ ಇರಬೇಡ. ಬಹು ಜ್ಞಾನಿಯಾಗಿಯೂ ಇರಬೇಡ; ಬಹು ಮೂಢನಾಗಿಯೂ ಇರಬೇಡ. ನಿನ್ನ ಕಾಲಕ್ಕಿಂತ ಮೊದಲೇ ನೀನು ಯಾಕೆ ಸಾಯಬೇಕು? (Verses 16-17)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?
Kannada BSI Bible 2016
ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮವನ್ನು ಅತಿಯಾಗಿ ಆಚರಿಸದಿರು; ಜ್ಞಾನವನ್ನು ಅಧಿಕವಾಗಿ ಆರ್ಜಿಸಬೇಡ; ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?
Kannada Bible (KNCL) BSI 2016
ಧರ್ಮಿಷ್ಠನಾಗಿ ಬಾಳುವುದರಲ್ಲಿ ಆಗಲಿ, ಜ್ಞಾನಾರ್ಜನೆಯಲ್ಲಾಗಲಿ ಮಿತಿಮೀರಿ ವರ್ತಿಸಬೇಡ; ನಿನ್ನನ್ನು ನೀನೇ ವಿನಾಶಕ್ಕೆ ಗುರಿಮಾಡಿಕೊಳ್ಳಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅತಿಯಾಗಿ ನೀತಿವಂತನಾಗಿರಬೇಡ. ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ?