Ecclesiastes 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಔತಣಕೂಟಕ್ಕೆ ಹೋಗುವುದಕ್ಕಿಂತ ಶವಸಂಸ್ಕಾರಕ್ಕೆ ಹೋಗುವುದು ಇನ್ನೂ ಉತ್ತಮ. ಯಾಕೆಂದರೆ ಎಲ್ಲರೂ ಒಂದು ದಿನ ಸಾಯಲೇಬೇಕು. ಸಾವನ್ನು ಕಂಡ ಪ್ರತಿಯೊಬ್ಬನು ಇದನ್ನು ಸ್ಮರಿಸಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.
Kannada BSI Bible 2016
ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನನ ದಿನಕ್ಕಿಂತ ಮರಣ ದಿನ ಮೇಲು. ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವದು ಲೇಸು; ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ; ಜೀವಂತನು ಇದನ್ನು ನೋಡಿ ಸ್ಮರಿಸಿಕೊಳ್ಳುವನು.
Kannada Bible (KNCL) BSI 2016
ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.